ಮೊಬೈಲ್ ಕಳ್ಳತನದ ಶಂಕೆಯಲ್ಲಿ 15 ವರ್ಷದ ಬಾಲಕನ ಥಳಿಸಿ ಹತ್ಯೆ
ಚೆನ್ನೈ, ಸೆ.24: ಮೊಬೈಲ್ ಕದ್ದಿದ್ದಾನೆ ಎಂಬ ಶಂಕೆಯಲ್ಲಿ 15 ವರ್ಷದ ಬಾಲಕನೊಬ್ಬನನ್ನು ಗುಂಪೊಂದು ಥಳಿಸಿ ಕೊಂದಿರುವ ಘಟನೆ ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿ ನಡೆದಿದೆ.
ಬಾಲಕ ಸಣ್ಣಪುಟ್ಟ ಕಳ್ಳತನಗಳನ್ನು ಮಾಡುತ್ತಿದ್ದ ಎನ್ನಲಾಗಿದೆ. ಇಲ್ಲಿನ ಗ್ರಾಮವೊಂದರಲ್ಲಿ ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಮತ್ತು 3000 ರೂ. ಕದ್ದಿದ್ದಾನೆಂಬ ಶಂಕೆಯಲ್ಲಿ ಗುಂಪು ಈತನನ್ನು ಥಳಿಸಿ ಕೊಂದಿದೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಶೀಘ್ರ ಬಂಧಿಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.
Next Story