ಭಾರತ ಶಾಂತಿಗೆ ಬದ್ಧವಾಗಿದೆ. ಆದರೆ ಸ್ವಾಭಿಮಾನ , ಸಾರ್ವಭೌಮತ್ವದೊಂದಿಗೆ ರಾಜಿ ಮಾಡಿಕೊಳ್ಳದು : ಪ್ರಧಾನಿ
ಹೊಸದಿಲ್ಲಿ, ಸೆ.30: ಭಾರತ ಶಾಂತಿಗೆ ಬದ್ಧವಾಗಿದೆ. ಆದರೆ ಸ್ವಾಭಿಮಾನ ಮತ್ತು ಸಾರ್ವಭೌಮತ್ವದೊಂದಿಗೆ ರಾಜಿ ಮಾಡಿಕೊಳ್ಳಲಾರದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.
ಆಕಾಶವಾಣಿಯ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಭಾರತದ ಯೋಧರ ಕರ್ತವ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಭಾರತದ ಯೋಧರ ಬಗ್ಗೆ ತಮಗೆ ಹೆಮ್ಮೆ ಇದೆ ಎಂದರು.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದದಲ್ಲಿ ಭಾರತೀಯ ಪಡೆಗಳು ನಡೆಸಿದ್ದ ಸರ್ಜಿಕಲ್ ದಾಳಿಯ ದ್ವಿತೀಯ ವಾರ್ಷಿಕೋತ್ಸವದ ಅಂಗವಾಗಿ ನಡೆಯುವ ಮೂರು ದಿನಗಳ ಸೇನಾ ಪ್ರದರ್ಶನ "ಪರಾಕ್ರಮ ಪರ್ವ"ಕ್ಕೆ ಚಾಲನೆ ನೀಡಿರುವ ಪ್ರಧಾನಿ ಮೋದಿ “ ನಮ್ಮ ಯೋಧರು ವಿರೋಧಿ ಪಡೆಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ಶ್ಲಾಘಿಸಿದರು.
Next Story