5 ರಾಜ್ಯಗಳ ಚುನಾವಣಾ ವೇಳಾಪಟ್ಟಿ ಪ್ರಕಟ
ಹೊಸ ದಿಲ್ಲಿ, ಅ.6: ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ, ತೆಲಂಗಾಣ ಮತ್ತು ಛತ್ತೀಸ್ ಗಡ ರಾಜ್ಯಗಳ ವಿಧಾನ ಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟಗೊಂಡಿದೆ.
ಸುದ್ದಿಗೋಷ್ಠಿಯಲ್ಲಿ ಕೇಂದ್ರ ಆಯುಕ್ತ ಒ.ಪಿ. ರಾವತ್ ಶನಿವಾರ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದರು.
ಮಧ್ಯಪ್ರದೇಶ ಮತ್ತು ಮಿಜೋರಾಂನಲ್ಲಿ ನ.28ರಂದು , ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ಡಿ.7ರಂದು ಒಂದೇ ಹಂತದಲ್ಲಿ, ಛತ್ತೀಸ್ ಗಡದಲ್ಲಿ ನ.12 ಮತ್ತು 20ರಂದು 2 ಹಂತದಲ್ಲಿ ಚುನಾವಣೆ ನಡೆಯಲಿದೆ .
ಮಂಡ್ಯ, ಬಳ್ಳಾರಿ, ಶಿವಮೊಗ್ಗ ಲೋಕಸಭಾ ಕ್ಷೇತ್ರ ಗಳಿಗೆ ಮತ್ತು ರಾಮನಗರ ಹಾಗೂ ಜಮಖಂಡಿ ವಿಧಾನಸಭಾ ಕ್ಷೇತ್ರಗಳಿಗೆ ನ.3ರಂದು ಉಪ ಚುನಾವಣೆ ನಡೆಯಲಿದೆ. ನ.6ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ.
Next Story