ಉ.ಪ್ರದೇಶ: ನಿರ್ಮಾಣ ಹಂತದ ಕಟ್ಟಡದ ಸೂರು ಕುಸಿತ
ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ
ಲಕ್ನೊ, ಅ.14: ನಿರ್ಮಾಣ ಹಂತದ ಕಟ್ಟಡವೊಂದರ ಸೂರು ಕುಸಿದುಬಿದ್ದಿದ್ದು ಕಟ್ಟಡದ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಮಚಂದ್ರ ಮಿಷನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ಕಾಲೇಜೊಂದರ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿದ್ದು ರವಿವಾರ 12ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ಸಂದರ್ಭ ಕಟ್ಟಡದ ಸೂರು ಕುಸಿದುಬಿದ್ದಿದೆ ಎಂದು ಸದರ್ ನಗರದ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ರಾಮ್ಜಿ ಮಿಶ್ರ ತಿಳಿಸಿದ್ದಾರೆ.
ತಕ್ಷಣ ಕ್ರೇನ್ಗಳು ಹಾಗೂ ಜೆಸಿಬಿ ಯಂತ್ರಗಳನ್ನು ಬಳಸಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಕೈಗೊಂಡಿದ್ದು ಸುಮಾರು 12 ಮಂದಿಯನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ . ಇನ್ನೂ ಎರಡು-ಮೂರು ಕಾರ್ಮಿಕರು ಅವಶೇಷಗಳಡಿ ಸಿಲುಕಿಕೊಂಡಿರುವ ಶಂಕೆಯಿದೆ ಎಂದವರು ತಿಳಿಸಿದ್ದಾರೆ.
Next Story