ಶ್ರೀನಗರದಲ್ಲಿ ಇಬ್ಬರು ಉಗ್ರರ ಹತ್ಯೆ
ಸಾಂದರ್ಭಿಕ ಚಿತ್ರ
ಶ್ರೀನಗರ,ಅ.24: ಶ್ರೀನಗರದ ಹೊರವಲಯದಲ್ಲಿರುವ ನೌಗಾಮ್ನ ಸೂಥು ಎಂಬಲ್ಲಿ ಬುಧವಾರ ಭದ್ರತಾ ಪಡೆಗಳೊಂದಿಗಿನ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಕೊಲ್ಲಲ್ಪಟ್ಟಿದ್ದಾರೆ.
ಇದು ಕಾಶ್ಮೀರ ಕಣಿವೆಯಲ್ಲಿ ಈ ವಾರ ನಡೆದ ಎರಡನೇ ಎನ್ಕೌಂಟರ್ ಆಗಿದೆ. ರವಿವಾರ ಕುಲ್ಗಾಮ್ ಜಿಲ್ಲೆಯಲ್ಲಿ ಮೂವರು ಉಗ್ರರು ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದರು.
ಸೂಥು ಪ್ರದೇಶದಲ್ಲಿ ಕೆಲವು ಉಗ್ರರಿದ್ದಾರೆ ಎಂಬ ಮಾಹಿತಿಯನ್ನು ಪಡೆದಿದ್ದ ಭದ್ರತಾ ಪಡೆಗಳು ನಸುಕಿನಲ್ಲಿಯೇ ಅಲ್ಲಿ ಶೋಧ ಕಾರ್ಯಚರಣೆಯನ್ನು ಆರಂಭಿಸಿದ್ದವು. ಈ ಸಂದರ್ಭ ಉಗ್ರರು ಗುಂಡಿನ ದಾಳಿ ನಡೆಸಿದಾಗ ಭದ್ರತಾ ಪಡೆಗಳು ಪ್ರತಿದಾಳಿಯನ್ನು ನಡೆಸಿದ್ದವು ಎಂದು ಮೂಲಗಳು ತಿಳಿಸಿದವು.
Next Story