ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಉಗ್ರರ ಹತ್ಯೆ
ಶ್ರೀನಗರ,ನ.4: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ಭದ್ರತಾ ಪಡೆಗಳು ಹಿಝ್ಬುಲ್ ಮುಜಾಹಿದ್ದೀನ್ನ ಇಬ್ಬರು ಉಗ್ರರನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಭದ್ರತಾ ಪಡೆ ಶನಿವಾರ ಶೋಪಿಯಾನ್ನ ಕುಡ್ಪೊರ ಪ್ರದೇಶದ ಸುತ್ತ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರು ಭದ್ರತಾ ಸಿಬ್ಬಂದಿಯ ಮೇಲೆ ಗುಂಡು ಹಾರಾಟ ನಡೆಸಿದ ಪರಿಣಾಮ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿವೆ. ಈ ದಾಳಿಯಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾದರೆ ಉಳಿದ ಇಬ್ಬರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಹತ್ಯೆಗೈಯ್ಯಲ್ಪಟ್ಟ ಉಗ್ರರನ್ನು ಮುಹಮ್ಮದ್ ಇರ್ಫಾನ್ ಭಟ್ ಮತ್ತು ಶಾಹಿದ್ ಮಿರ್ ಎಂದು ಗುರುತಿಸಲಾಗಿದೆ. ಉಗ್ರರಿಂದ ಬೃಹತ್ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Next Story