9 ದಿನಗಳಲ್ಲಿ 18 ನವಜಾತ ಶಿಶುಗಳು ಮೃತ್ಯು
ಜೋರ್ಹಟ್, ನ.10: ಕಳೆದ 9 ದಿನಗಳಿಂದ ಅಸ್ಸಾಂನ ಜೋರ್ಹಟ್ ಎಂಬಲ್ಲಿನ ಆಸ್ಪತ್ರೆಯೊಂದರಲ್ಲಿ 18 ನವಜಾತ ಶಿಶುಗಳು ಮೃತಪಟ್ಟಿರುವುದಾಗಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಯುನಿಸೆಫ್ ಪ್ರತಿನಿಧಿಯೊಬ್ಬರು ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
ಆಸ್ಪತ್ರೆಯಲ್ಲಿ ಮಕ್ಕಳು ಮೃತಪಟ್ಟಿರುವುದು ನಿಜ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ. “ಪ್ರಕರಣಕ್ಕೆ ಸಂಬಂಧಿಸಿ ಆಂತರಿಕ ಸಮಿತಿಯೊಂದನ್ನು ರಚಿಸಲಾಗಿದೆ. ನವೆಂಬರ್ 1ರಿಂದ 15 ಮಕ್ಕಳು ಮೃತಪಟ್ಟಿದ್ದಾರೆ ಎಂದವರು ಮಾಹಿತಿ ನೀಡಿದ್ದಾರೆ.
Next Story