ಪಂಚಾಯತ್ ಚುನಾವಣೆಗೆ ಮುನ್ನ ಜಮ್ಮು ಕಾಶ್ಮೀರದಲ್ಲಿ ಬಿಜೆಪಿಗೆ ಆಘಾತ
ಹೊಸದಿಲ್ಲಿ, ನ.16: ಜಮ್ಮು ಮತ್ತು ಕಾಶ್ಮೀರ ಪಂಚಾಯತ್ ಚುನಾವಣೆಗೆ ಇನ್ನೇನು ಕೆಲವೇ ದಿನಗಳಿರುವಂತೆ ಲಡಾಖ್ ನ ಸಂಸದ ತುಪ್ಸಾನ್ ಚೆವಾಂಗ್ ರಾಜೀನಾಮೆ ನೀಡಿದ್ದು, ಬಿಜೆಪಿ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ.
ಆರೋಗ್ಯ ಸಮಸ್ಯೆಯ ಕಾರಣ ನೀಡಿ ತಾನು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಚೆವಾಂಗ್ ಬಿಜೆಪಿ ರಾಜ್ಯಾಧ್ಯಕ್ಷ ರವೀಂದರ್ ರೈನಾರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಚೆವಾಂಗ್ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡಿಲ್ಲವಾದರೂ ರಾಜ್ಯ ಬಿಜೆಪಿ ನಾಯಕತ್ವದೊಂದಿಗೆ ಅವರು ಅಸಮಾಧಾನ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೇ ಕಾರಣದಿಂದ ಅವರು ಇತ್ತೀಚೆಗೆ ನಡೆದ ಲಡಾಖ್ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಅವರು ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿರಲಿಲ್ಲ.
Next Story