ರೆಹಾನಾ ಫಾತಿಮಾಗೆ ನಿರೀಕ್ಷಣಾ ಜಾಮೀನು ನಿರಾಕರಣೆ
ತಿರುವನಂತಪುರಂ, ನ.15: ಅಕ್ಟೋಬರ್ನಲ್ಲಿ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ವಿಫಲ ಪ್ರಯತ್ನ ನಡೆಸಿದ್ದ ಸಾಮಾಜಿಕ ಕಾರ್ಯಕರ್ತೆ ರೆಹಾನಾ ಫಾತಿಮಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ತಿರಸ್ಕರಿಸಿದೆ.
ಅಯ್ಯಪ್ಪ ದೇವರ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಬರಹಗಳನ್ನು ಪೋಸ್ಟ್ ಮಾಡುವ ಮೂಲಕ ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಘಾಸಿ ಎಸಗಿದ್ದಾರೆ ಎಂದು ರೆಹಾನಾ ವಿರುದ್ಧ ಶಬರಿಮಲೆ ಸಂರಕ್ಷಣಾ ಸಮಿತಿ ಅಕ್ಟೋಬರ್ 30ರಂದು ದೂರು ನೀಡಿದ್ದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಹೈಕೋರ್ಟ್ ಜಾಮೀನು ನಿರಾಕರಿಸಿರುವ ಹಿನ್ನೆಲೆಯಲ್ಲಿ ತಾನು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸುವುದಾಗಿ ರೆಹಾನಾ ತಿಳಿಸಿದ್ದಾರೆ.
Next Story