ಜಮ್ಮು: ಇಬ್ಬರು ಉಗ್ರರ ಹತ್ಯೆ
ಶ್ರೀನಗರ, ನ.18: ಜಮ್ಮು-ಕಾಶ್ಮೀರದ ಶೋಫಿಯಾನ್ ಜಿಲ್ಲೆಯಲ್ಲಿ ರವಿವಾರ ಭದ್ರತಾ ಪಡೆಗಳೊಂದಿಗಿನ ಗುಂಡಿನ ಕಾಳಗದಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಸೇನಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.
ಶೋಫಿಯಾನ್ ಜಿಲ್ಲೆಯ ರೆಬಾನ್ ಗ್ರಾಮದಲ್ಲಿ ಭಯೋತ್ಪಾದಕರ ಚಲನವಲನದ ಬಗ್ಗೆ ದೊರೆತ ಮಾಹಿತಿಯನ್ವಯ ಅಲ್ಲಿಗೆ ಧಾವಿಸಿದ ಭದ್ರತಾ ಪಡೆ ಪ್ರದೇಶವನ್ನು ಸುತ್ತುವರಿದು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದವು. ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಎನ್ಕೌಂಟರ್ ನಡೆದ ಪ್ರದೇಶದಲ್ಲಿ ಉಗ್ರರು ಎಸೆದಿರುವ ಸ್ಫೋಟಕಗಳು ಇರುವ ಸಾಧ್ಯತೆಯಿದ್ದು ಅವನ್ನು ನಿಷ್ಕ್ರಿಯಗೊಳಿಸುವ ಕಾರ್ಯಾಚರಣೆ ಮುಗಿಯುವವರೆಗೆ ಅಲ್ಲಿಗೆ ತೆರಳದಂತೆ ಜನತೆಗೆ ಭದ್ರತಾ ಪಡೆಗಳು ಎಚ್ಚರಿಕೆ ನೀಡಿವೆ.
Next Story