ನಾನು ಜಯಗಳಿಸಿದರೆ ಬಾಲ್ಯ ವಿವಾಹಗಳನ್ನು ಪೊಲೀಸರು ತಡೆಯುವುದಿಲ್ಲ!
ಮತದಾರರಿಗೆ ಬಿಜೆಪಿ ಅಭ್ಯರ್ಥಿಯ ಭರವಸೆ
ರಾಜಸ್ಥಾನ, ಡಿ.1: ಚುನಾವಣೆಯಲ್ಲಿ ತಾನು ಜಯ ಗಳಿಸಿದರೆ ರಾಜ್ಯದಲ್ಲಿ ನಡೆಯುವ ಬಾಲ್ಯ ವಿವಾಹಗಳಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಎಂದು ರಾಜಸ್ಥಾನದ ಬಿಜೆಪಿ ಅಭ್ಯರ್ಥಿಯೊಬ್ಬರು ಮತದಾರರಿಗೆ ಭರವಸೆ ನೀಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ.
ಪಾಲಿ ಜಿಲ್ಲೆಯ ಬಿಜೆಪಿ ಅಭ್ಯರ್ಥಿಯಾಗಿರುವ ಶೋಭಾ ಚೌಹಾಣ್ ಪ್ರಚಾರ ಸಭೆಯೊಂದರಲ್ಲಿ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ತಾನು ಜಯ ಗಳಿಸಿದರೆ ಇಲ್ಲಿ ನಡೆಯುವ ಬಾಲ್ಯ ವಿವಾಹಗಳಿಗೆ ಪೊಲೀಸರು ಮಧ್ಯ ಪ್ರವೇಶಿಸುವುದಿಲ್ಲ ಎಂದು ಶೋಭಾ ಹೇಳಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.
ಐಎಎಸ್ ಅಧಿಕಾರಿ ರಾಜೇಶ್ ಚೌಹಾಣ್ ರ ಪತ್ನಿಯಾಗಿರುವ ಶೋಭಾ ಚೌಹಾಣ್ ಎರಡನೆ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.
Next Story