ಖ್ಯಾತ ಬ್ಯಾಡ್ಮಿಂಟನ್ ತಾರೆ ಜ್ವಾಲಾ ಗುಟ್ಟಾ ಹೆಸರು ಮತದಾರರ ಪಟ್ಟಿಯಿಂದ ನಾಪತ್ತೆ
ಹೈದರಾಬಾದ್, ಡಿ.7: ಖ್ಯಾತ ಬ್ಯಾಡ್ಮಿಂಟನ್ ತಾರೆ ಜ್ವಾಲಾ ಗುಟ್ಟಾ ಅವರು ಶುಕ್ರವಾರ ಬಂಜಾರ ಹಿಲ್ಸ್ ಮತಗಟ್ಟೆಯಲ್ಲಿ ಮತದಾನ ಮಾಡಲು ಹೋದಾಗ ಅವರಿಗೆ ಅಚ್ಚರಿ ಕಾದಿತ್ತು. ಅವರ ಹೆಸರು ಮತದಾರರ ಪಟ್ಟಿಯಿಂದ ನಾಪತ್ತೆಯಾಗಿತ್ತು.
ಮತದಾರರ ಪಟ್ಟಿಯಿಂದ ಹೆಸರು ನಾಪತ್ತೆಯಾದ ಹಿನ್ನೆಲೆಯಲ್ಲಿ ಅವರು ನಿರಾಸೆಗೊಂಡರು.
“ಆನ್ ಲೈನ್ ನಲ್ಲಿ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಂಡು ಮತಗಟ್ಟೆಗೆ ಮತದಾನ ಮಾಡಲು ತೆರಳಿದ್ದೆ. ಆದರೆ ನನ್ನ ಹೆಸರು ಮತದಾರರ ಪಟ್ಟಿಯಿಂದ ನಾಪತ್ತೆಯಾಗಿತ್ತು. ಈ ಕಾರಣದಿಂದಾಗಿ ಮತದಾನ ಮಾಡಲು ಸಾಧ್ಯವಾಗಿಲ್ಲ. ಇದು ಎಂಥಾ ಚುನಾವಣಾ ನ್ಯಾಯ ”ಎಂದು ಜ್ವಾಲಾ ಗುಟ್ಟಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತೆಲಂಗಾಣ ಮತ್ತು ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಮತದಾನ ಶುಕ್ರವಾರ ಬೆಳಗ್ಗೆ ಆರಂಭಗೊಂಡಿದೆ.
Next Story