ತೆಲಂಗಾಣ ಸಿಎಂ ಆಗಿ ಚಂದ್ರಶೇಖರ್ ರಾವ್ ಪ್ರಮಾಣವಚನ
ಹೈದರಾಬಾದ್, ಡಿ.13: ತೆಲಂಗಾಣ ರಾಜ್ಯದ ಮುಖ್ಯಮಂತ್ರಿಯಾಗಿ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ಎಸ್)ಮುಖ್ಯಸ್ಥ ಕೆ.ಚಂದ್ರಶೇಖರ್ ರಾವ್ ಗುರುವಾರ ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲ ಇಎಸ್ಎಲ್ ನರಸಿಂಹನ್ ಪ್ರತಿಜ್ಞಾವಿಧಿ ಬೋಧಿಸಿದರು. ಕೆಸಿಆರ್ ಸತತ ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಟಿಆರ್ಎಸ್ 119 ಸದಸ್ಯಬಲದ ವಿಧಾನಸಭಾ ಚುನಾವಣೆಯಲ್ಲಿ 87 ಕ್ಷೇತ್ರಗಳಲ್ಲಿ ಜಯ ಸಾಧಿಸಿ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದೆ.
Next Story