4 ವರ್ಷಗಳಲ್ಲಿ ಗಲ್ಫ್ ರಾಷ್ಟ್ರಗಳಲ್ಲಿ ಎಷ್ಟು ಸಾವಿರ ಭಾರತೀಯರು ಮೃತಪಟ್ಟಿದ್ದಾರೆ?
ಇಲ್ಲಿದೆ ಮಾಹಿತಿ
ಹೊಸದಿಲ್ಲಿ, ಡಿ.13: ಕಳೆದ ನಾಲ್ಕು ವರ್ಷಗಳಲ್ಲಿ ಗಲ್ಫ್ ರಾಷ್ಟ್ರಗಳಲ್ಲಿ 28,523 ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ಸರಕಾರ ತಿಳಿಸಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಿದೇಶ ವ್ಯವಹಾರ ಇಲಾಖೆಯ ಸಹಾಯಕ ಸಚಿವ ವಿ.ಕೆ.ಸಿಂಗ್, 2014ರಿಂದ 2018ರ ಅವಧಿಯಲ್ಲಿ ಸೌದಿ ಅರೇಬಿಯಾದಲ್ಲಿ 12,828, ಯುಎಇಯಲ್ಲಿ 7,877, ಬಹರೈನ್ನಲ್ಲಿ 1,021, ಕುವೈತ್ನಲ್ಲಿ 2,932, ಒಮಾನ್ನಲ್ಲಿ 2,564, ಕತರ್ನಲ್ಲಿ 1,301 ಭಾರತೀಯರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು.
ಕಳೆದ ನಾಲ್ಕು ವರ್ಷಗಳಿಗೆ ಹೋಲಿಸಿದರೆ 2016ರಲ್ಲಿ (6,031) ಮತ್ತು 2017ರಲ್ಲಿ (5,906) ಅಧಿಕ ಪ್ರಮಾಣದಲ್ಲಿ ಭಾರತೀಯರು ಸಾವನ್ನಪ್ಪಿದ್ದಾರೆ . ಗಲ್ಫ್ ರಾಷ್ಟ್ರಗಳಲ್ಲಿ ಆತ್ಮಹತ್ಯೆ, ರಸ್ತೆ ಅಪಘಾತಗಳಲ್ಲಿ ಕಾರ್ಮಿಕರು ಪ್ರಾಣ ಕಳೆದುಕೊಳ್ಳುವುದನ್ನು ತಡೆಯಲು ಆ ರಾಷ್ಟ್ರಗಳಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮತ್ತು ‘ಪ್ರವಾಸಿ ಭಾರತೀಯ ಕೇಂದ್ರ’ಗಳ ನೆರವಿನಿಂದ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
Next Story