ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಹಿರಿಯ ಕಾಂಗ್ರೆಸ್ಸಿಗ ಕಮಲ್ ನಾಥ್ ಆಯ್ಕೆ
ಹೊಸದಿಲ್ಲಿ, ಡಿ.13: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ವಿಜಯದ ಬಳಿಕ ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಪಕ್ಷದ ರಾಜ್ಯಾಧ್ಯಕ್ಷ, ಹಿರಿಯ ನಾಯಕ ಕಮಲ್ ನಾಥ್ ಆಯ್ಕೆಯಾಗಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ತೀವ್ರ ಕುತೂಹಲ ಕೆರಳಿಸಿದ್ದ ಸಿಎಂ ರೇಸ್ ಗೆ ಈ ಮೂಲಕ ಕೊನೆಗೂ ತೆರೆಬಿದ್ದಿದೆ.
ಗುರುವಾರ ರಾತ್ರಿ ಭೋಪಾಲ್ ನಲ್ಲಿ ನಡೆದ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಕಮಲ್ ನಾಥ್ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ.
Next Story