Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಯಂತ್ ಕಾಯ್ಕಿಣಿ ಕೃತಿಗೆ ಪ್ರತಿಷ್ಠಿತ ಡಿ...

ಜಯಂತ್ ಕಾಯ್ಕಿಣಿ ಕೃತಿಗೆ ಪ್ರತಿಷ್ಠಿತ ಡಿ ಎಸ್ ಸಿ ಪ್ರಶಸ್ತಿ

ಡಿ ಎಸ್ ಸಿ ಪ್ರೈಜ್ ಫಾರ್ ಸೌತ್ ಏಷಿಯನ್ ಲಿಟರೇಚರ್ 2018 ಪ್ರಶಸ್ತಿಗೆ ಪಾತ್ರವಾದ ಪ್ರಪ್ರಥಮ ಅನುವಾದಿತ ಕೃತಿ

ವಾರ್ತಾಭಾರತಿವಾರ್ತಾಭಾರತಿ25 Jan 2019 8:04 PM IST
share
ಜಯಂತ್ ಕಾಯ್ಕಿಣಿ ಕೃತಿಗೆ ಪ್ರತಿಷ್ಠಿತ ಡಿ ಎಸ್ ಸಿ ಪ್ರಶಸ್ತಿ

ಕೋಲ್ಕತಾ,ಜ.25:  ಜನಪ್ರಿಯ ಕನ್ನಡ ಸಾಹಿತಿ ಜಯಂತ್ ಕಾಯ್ಕಿಣಿ 2018ರ ಸಾಲಿನ ದಕ್ಷಿಣ ಏಶ್ಯ ಸಾಹಿತ್ಯಕ್ಕಾಗಿನ ಡಿಎಸ್‌ಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅವರ ಅನುವಾದಿತ ಕೃತಿ ‘‘ ನೋ ಪ್ರೆಸೆಂಟ್ಸ್ ಪ್ಲೀಸ್’ಗಾಗಿ ಈ ಪ್ರತಿಷ್ಠಿತ ಪ್ರಶಸ್ತಿ ದೊರೆತಿದೆ. ಕೋಲ್ಕತಾ ಪ್ರಖ್ಯಾತ ವಿಕ್ಟೋರಿಯಾ ಸ್ಮಾರಕ ಸಭಾಭವನದಲ್ಲಿ ಶುಕ್ರವಾರ ನಡೆದ ‘ಟಾಟಾ ಸ್ಟೀಲ್ ಕೋಲ್ಕತಾ ಸಾಹಿತ್ಯ ಸಮ್ಮೇಳನ’ದಲ್ಲಿ ಈ ಪ್ರಶಸ್ತಿಯನ್ನು ಘೋಷಿಸಲಾಯಿತು. ಜಯಂತ್ ಕಾಯ್ಕಿಣಿ ಹಾಗೂ ಅನುವಾದಕಿ ತೇಜಸ್ವಿ ನಿರಂಜನ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಹಿರಿಯ ಆಂಗ್ಲ ಸಾಹಿತಿ ರಸ್ಕಿನ್ ಬಾಂಡ್ ಪ್ರಶಸ್ತಿ ಪ್ರದಾನ ಮಾಡಿದರು. ಅನುವಾದಿತ ಕೃತಿಯೊಂದು 25 ಸಾವಿರ ಡಾಲರ್ ಮೊತ್ತದ ಡಿಎಸ್‌ಸಿ ಪ್ರಶಸ್ತಿಯನ್ನು ಪಡೆದಿರುವುದು ಇದೇ ಮೊದಲ ಸಲವಾಗಿದೆ.

ಹಲವಾರು ದ್ವಂದ್ವಗಳ ಹೊರತಾಗಿಯೂ,ಚೈತನ್ಯಶೀಲತೆಯನ್ನು ಮೈಗೂಡಿಸಿಕೊಂಡಿರುವ, ಸಮಸ್ಯೆಗಳಿಂದ ಜರ್ಝರಿತವಾಗಿದ್ದರೂ ಹೃದಯ ವೈಶಾಲ್ಯತೆಯುಳ್ಳ ಮುಂಬೈ ಮಹಾನಗರದ ಕಥೆಯನ್ನು ‘‘ನೋ ಪ್ರೆಸೆಂಟ್ಸ್ ಪ್ಲೀಸ್’’ ಕೃತಿಯು ಲವಲವಿಕೆಯೊಂದಿಗೆ ಹೇಳಿದೆಯೆಂದು ಪ್ರಶಸ್ತಿ ಘೋಷಣೆಯ ಸಂದರ್ಭದಲ್ಲಿ ನಿರೂಪಕರು ವಿವರಿಸಿದರು.

ಅನುಭೂತಿ ಹಾಗೂ ಅಸ್ತಿತ್ವಕ್ಕಾಗಿನ ಹೋರಾಟವು ಈ ಅಸಾಧಾರಣ ಕೃತಿಯ ಪ್ರತಿಯೊಂದು ಎಳೆಯನ್ನು ಒಗ್ಗೂಡಿಸುವ ಥೀಮ್‌ಗಳಾಗಿವೆ. ಎಷ್ಟು ಮೃದುವಾಗಿದೆಯೋ, ಕೆಲವು ಸಂದರ್ಭಗಳಲ್ಲಿ ಅಷ್ಟೇ ಕ್ರೂರವಾಗಿ ವರ್ತಿಸುವ ಈ ಮಹಾನಗರದ ಸ್ಪಷ್ಟವಾದ ನೋಟವನ್ನು ಈ ಕೃತಿಯು ನೀಡಿದೆ ಎಂದು ಡಿಎಸ್‌ಸಿ ಸಮೂಹ ಹೇಳಿಕೆಯಲ್ಲಿ ತಿಳಿಸಿದೆ.

‘ನೋ ಪ್ರೆಸೆಂಟ್ಸ್ ಪ್ಲೀಸ್’ ಕೃತಿಯನ್ನು ಹಾರ್ಪರ್ ಕಾಲಿನ್ಸ್ ಇಂಡಿಯಾ ಪ್ರಕಟಿಸಿದೆ.

ನೋ ಪ್ರೆಸೆಂಟ್ಸ್ ಪ್ಲೀಸ್ ಕೃತಿಯಲ್ಲಿ ಜಯಂತ್ ಕಾಯ್ಕಿಣಿ ಅವರು ಮುಂಬೈ ನಗರ ಬದುಕಿನ ಚಿತ್ರಣವನ್ನು ಸುಸಂಬದ್ಧ ನಿರೂಪಿಸಿರುವುದು ತೀರ್ಪುಗಾರ ಸಮಿತಿಗೆ ತುಂಬಾ ಮೆಚ್ಚುಗೆಯಾಗಿದೆ ಎಂದು ತೀರ್ಪುಗಾರ ಮಂಡಳಿಯ ಅಧ್ಯಕ್ಷ ರುದ್ರಾಂಶು ಮುಖರ್ಜಿ ತಿಳಿಸಿದ್ದಾರೆ.

ಅನುವಾದಿತ ಕೃತಿಯೊಂದಕ್ಕೆ ಈ ಪ್ರಶಸ್ತಿಯನ್ನು ನೀಡುತ್ತಿರುವುದು ಇದೇ ಮೊದಲ ಸಲವಾಗಿದೆ. ಅನುವಾದಕಿ ತೇಜಸ್ವಿನಿ ನಿರಂಜನ ಅವರ ಅಸಾ ಧಾರಣ ಕೊಡುಗೆಯನ್ನು ತೀರ್ಪುಗಾರರು ಪರಿಗಣಿಸಿರುವುದಾಗಿ ಅವರು ಹೇಳಿದ್ದಾರೆ. ರುದ್ರಾಂಶು ಮುಖರ್ಜಿ ಹೊರತಾಗಿ, ನಂದನಾ ಸೇನ್, ಕ್ಲೇರ್ ಆರ್ಮಿಸ್ಟೆಡ್, ಟಿಸ್ಸಾ ಜಯತಿಲಕ ಹಾಗೂ ಫಿರ್ದೂಸ್ ಆಝ್ಮಿ ತೀರ್ಪುಗಾರ ಸಮಿತಿಯ ಇತರ ಸದಸ್ಯರಾಗಿದ್ದಾರೆ.

ಕಾಮಿಲಾ ಶಾಮ್ಸಿ (ಹೋಮ್ ಫೈರ್), ಮನುಜೋಸೆಫ್ (ಮಿಸ್ ಲೈಲಾ ಆರ್ಮ್‌ಡ್ ಆ್ಯಂಡ್ ಡೇಂಜರಸ್), ಮೊಹ್ಸಿನ್ ಅಹ್ಮದ್ (ಎಕ್ಸಿಟ್ ವೆಸ್ಟ್), ನೀಲ್ ಮುಖರ್ಜಿ (ಎ ಸ್ಟೇಟ್ ಆಫ್ ಫ್ರೀಡಂ) ಹಾಗೂ ಸುಜಿತ್ ಸರಾಫ್ (ಹರಿಲಾಲ್ ಆ್ಯಂಡ್ ಸನ್ಸ್) ಅವರು ಡಿಎಸ್‌ಸಿ ಸಾಹಿತ್ಯ ಪ್ರಶಸ್ತಿ ಸ್ಪರ್ಧೆಯ ಅಂತಿಮ ಪಟ್ಟಿಯಲ್ಲಿದ್ದ ಇತರ ಬರಹಗಾರರಾಗಿದ್ದಾರೆ.

2010ರಲ್ಲಿ ಸ್ಥಾಪನೆಯಾದ ದಕ್ಷಿಣ ಏಶ್ಯ ಸಾಹಿತ್ಯಕ್ಕಾಗಿನ ಡಿಎಸ್‌ಸಿ ಪ್ರಶಸ್ತಿಯನ್ನು, ಪ್ರತಿ ವರ್ಷ ದಕ್ಷಿಣ ಏಶ್ಯದಲ್ಲಿ ಪ್ರಕಟವಾಗುವ ಅತ್ಯುತ್ತಮ ಕಾದಂಬರಿ ಸಾಹಿತ್ಯಕ್ಕಾಗಿ ನೀಡಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X