ಜಮ್ಮುವಿನಲ್ಲಿ ಉಗ್ರರಿಂದ ಗ್ರೇನೆಡ್ ದಾಳಿ; ಇಬ್ಬರು ಪೊಲೀಸರಿಗೆ ಗಾಯ
ಶ್ರೀನಗರ, ಮಾ.21: ಜಮ್ಮು ಮತ್ತು ಕಾಶ್ಮೀರದ ಸೊಪೋರ್ ಪಟ್ಟಣದಲ್ಲಿ ಗುರುವಾರ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.
ಸೊಪೋರ್ ನಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ಭದ್ರತಾ ಪಡೆ ಚುರುಕುಗೊಳಿಸಿದ್ದಾರೆ. ಅಡಗಿಕೊಂಡಿರುವ ಉಗ್ರರಿಗಾಗಿ ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದಾಗ ಅವರ ಮೇಲೆ ಉಗ್ರರು ಗ್ರೇನೆಡ್ ದಾಳಿ ನಡೆಸಿದ್ದಾರೆ. ಡಾಂಗಿವಾಚಾ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೊಪೋರ್ ನಲ್ಲಿ ಮೊಬೈಲ್, ಇಂಟರ್ ನೆಟ್ ಸಂಪರ್ಕ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
Next Story