---

ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿಗೆ ಟಿಕೆಟ್

ಭೋಪಾಲದಲ್ಲಿ ದಿಗ್ವಿಜಯ ಸಿಂಗ್ ವಿರುದ್ಧ ಬಿಜೆಪಿಯಿಂದ ಪ್ರಜ್ಞಾಸಿಂಗ್

ಭೋಪಾಲ, ಎ.17: ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದು,ಅವರನ್ನು ಭೋಪಾಲ ಲೋಕಸಭಾ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಯಾಗಿ ಪಕ್ಷವು ಬುಧವಾರ ಘೋಷಿಸಿದೆ. ಠಾಕೂರ್ ಅವರು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರನ್ನು ಎದುರಿಸಲಿದ್ದು,ಭಾರೀ ಹಣಾಹಣಿಯನ್ನು ನಿರೀಕ್ಷಿಸಬಹುದಾಗಿದೆ.

ಆರು ಜನರು ಮೃತಪಟ್ಟು 100ಕ್ಕೂ ಅಧಿಕ ಜನರು ಗಾಯಗೊಂಡಿದ್ದ 2008ರ ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಠಾಕೂರ್ ಪ್ರಮುಖ ಆರೋಪಿಯಾಗಿದ್ದಾರೆ. ದಿಗ್ವಿಜಯ ಸಿಂಗ್ ಅವರು ಹಿಂದು ಉಗ್ರವಾದವನ್ನು ಉತ್ತೇಜಿಸುತ್ತಿರುವುದಕ್ಕಾಗಿ ಆಗಾಗ್ಗೆ  ಬಿಜೆಪಿ ವಿರುದ್ಧ  ದಾಳಿಗಳನ್ನು ನಡೆಸುತ್ತಲೇ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ‘ಹಿಂದು ಭಯೋತ್ಪಾದನೆ’ಯು ಚುನಾವಣೆಯಲ್ಲಿ  ಸಂಘರ್ಷದ ಕೇಂದ್ರಬಿಂದುವಾಗುವ ಸಾಧ್ಯತೆಯಿದೆ.

1989ರಿಂದಲೂ ಬಿಜೆಪಿಯ ಭದ್ರಕೋಟೆಯಾಗಿರುವ ಭೋಪಾಲದಲ್ಲಿ ಸ್ಪರ್ಧಿಸಲು ಹಿರಿಯ ಬಿಜೆಪಿ ನಾಯಕರಾದ ನರೇಂದ್ರ ಸಿಂಗ್ ತೋಮರ್, ಶಿವರಾಜ ಸಿಂಗ್ ಚೌಹಾಣ್ ಮತ್ತು ಉಮಾ ಭಾರತಿ ಅವರು ನಿರಾಸಕ್ತಿ ವ್ಯಕ್ತಪಡಿಸಿದ ಬಳಿಕ ಠಾಕೂರ್ ಅವರಿಗೆ ಟಿಕೆಟ್ ನೀಡಲು ಬಿಜೆಪಿಯು ಒಲವು ಹೊಂದಿತ್ತು ಎಂದು ಪಕ್ಷದಲ್ಲಿನ ಮೂಲಗಳು ತಿಳಿಸಿದ್ದವು. ಇದೀಗ ಬಿಜೆಪಿಯು ಠಾಕೂರ್ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಅಧಿಕೃತವಾಗಿ ಘೋಷಿಸಿರುವುದು ಈ ಪ್ರತಿಷ್ಠಿತ ಕ್ಷೇತ್ರದಲ್ಲಿ ಹಿಂದುತ್ವವನ್ನು ಪ್ರಮುಖ ಚುನಾವಣಾ ವಿಷಯವನ್ನಾಗಿಸುವ ಪಕ್ಷದ ಪ್ರಯತ್ನವನ್ನು ಬೆಟ್ಟು ಮಾಡಿದೆ.

ಠಾಕೂರ್ ಪ್ರಸಕ್ತ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದಾರೆ. ಎನ್‌ಐಎ ನ್ಯಾಯಾಲಯವು ಅವರ ವಿರುದ್ಧ ಮೋಕಾ ಕಾಯ್ದೆಯಡಿ ಆರೋಪಗಳನ್ನು ಕೈಬಿಟ್ಟಿದೆಯಾದರೂ,ಅವರು ಮತ್ತು ಇತರ ಸಹ ಆರೋಪಿಗಳು ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಇತರ ಆರೋಪಗಳನ್ನು ಈಗಲೂ ಎದುರಿಸುತ್ತಿದ್ದಾರೆ.

ಬುಧವಾರ ಇಲ್ಲಿಯ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದ ಠಾಕೂರ್ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ತಾನು ಮಂಗಳವಾರ ಬಿಜೆಪಿಯ ಸದಸ್ಯತ್ವವನ್ನು ಪಡೆದಿದ್ದಾಗಿ ತಿಳಿಸಿದರು. ಎಬಿವಿಪಿ ಮತ್ತು ದುರ್ಗಾ ವಾಹಿನಿಗಳಂತಹ ಕೇಸರಿ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿದ್ದ ಠಾಕೂರ್ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯರೂ ಆಗಿರಲಿಲ್ಲ.

ರಾಷ್ಟ್ರವು ಸುರಕ್ಷಿತವಾಗಿದ್ದರೆ ನಾವೆಲ್ಲರೂ ಸುರಕ್ಷಿತರಾಗಿರುತ್ತೇವೆ. ಆಗಲೇ ನಾವು ನಮ್ಮ ಕರ್ತವ್ಯಗಳನ್ನು ನಿರ್ವಹಿಸಲು ಸಾಧ್ಯ ಎನ್ನುವ ಮೂಲಕ ಚುನಾವಣೆಯಲ್ಲಿ ತನ್ನ ಆದ್ಯತೆಯ ಸುಳಿವನ್ನು ನೀಡಿದ ಅವರು,ರಾಷ್ಟ್ರದ ವಿರುದ್ಧ ಕೆಲಸ ಮಾಡುತ್ತಿರುವವರೊಂದಿಗೆ ನಾವು ಹೋರಾಡುತ್ತೇವೆ ಮತ್ತು ಅವರನ್ನು ಪರಾಭವಗೊಳಿಸುತ್ತೇವೆ ಎಂದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top