---

ಸಿಕ್ಕಿಂ: ಮತದಾನೋತ್ತರ ಸಮೀಕ್ಷೆ ನಡೆಸಿದವರ ಬಂಧನ

ಗ್ಯಾಂಗ್ಟಕ್, ಎ.17: ಗ್ಯಾಂಗ್ಟಕ್‌ನಲ್ಲಿ ಮತದಾನದ ಬಳಿಕ ಸಮೀಕ್ಷೆ ನಡೆಸಿದ ‘ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟೀಸ್(ಸಿಎಸ್‌ಡಿಎಸ್)ನ ರಾಜ್ಯ ಸಮನ್ವಯಕಾರ ಹಾಗೂ ಹಲವು ಕ್ಷೇತ್ರ ಕಾರ್ಯಕರ್ತರನ್ನು ಮಂಗಳವಾರ ರಾತ್ರಿ ಸಿಕ್ಕಿಂ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಸಮೀಕ್ಷೆ ನಡೆಸಲು ತಾನು ಅನುಮತಿ ಪಡೆದಿರಲಿಲ್ಲ. ಇದಕ್ಕೆ ಅನುಮತಿಯ ಅಗತ್ಯವೂ ಇಲ್ಲ. ಈ ಹಿಂದೆ ನಾವು ಹಲವು ಬಾರಿ ಮತದಾನೋತ್ತರ ಸಮೀಕ್ಷೆ ನಡೆಸಿದ್ದೇವೆ. ಆದರೆ ಅಧಿಕಾರಿಗಳು ನಾವು ಚುನಾವಣೆಯ ಗೌಪ್ಯತೆ ನಿಯಮವನ್ನು ಉಲ್ಲಂಘಿಸಿರುವುದಾಗಿ ಆರೋಪಿಸಲಾಗಿದೆ ಎಂದು ಬಂಧಿತ ಅಧಿಕಾರಿ ಮುಕುಂದ್ ಗಿರಿ ಹೇಳಿದ್ದಾರೆ. ಪೂರ್ವ ಸಿಕ್ಕಿಂನ ಐರ್‌ಥಾಂಗ್‌ನಲ್ಲಿ ಸಂಸ್ಥೆಗೆ ಸಂಬಂಧಿಸಿದ ವಿದ್ಯಾರ್ಥಿಗಳು ಸಮೀಕ್ಷೆ ನಡೆಸುತ್ತಿದ್ದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ ಎಂದವರು ಹೇಳಿದ್ದಾರೆ.

ರಾಷ್ಟ್ರೀಯ ಚುನಾವಣಾ ಸಮೀಕ್ಷೆ 2019ರ ಅನ್ವಯ ಸಮೀಕ್ಷೆ ನಡೆಸಲಾಗುತ್ತಿತ್ತು ಮತ್ತು ಇಂತಹ ಸಮೀಕ್ಷೆಯನ್ನು 1996ರಿಂದಲೂ ನಡೆಸುತ್ತಿದ್ದೇವೆ. ರಾಷ್ಟ್ರದಲ್ಲಿ ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ಸಮೀಕ್ಷೆಯ ವರದಿ ಪ್ರಕಟವಾಗುವುದಿಲ್ಲ. ಇದೊಂದು ಶೈಕ್ಷಣಿಕ ಅಧ್ಯಯನದ ಭಾಗವಾಗಿದೆ. ರಾಜಕೀಯ ಪಕ್ಷಗಳಿಗೆ ಇಂತಹ ಸಮೀಕ್ಷೆಯಿಂದ ಯಾವುದೇ ಅಭ್ಯಂತರವಿಲ್ಲ ಎಂಬ ನಂಬಿಕೆಯಿದೆ. ಇದನ್ನು ಗಮನಿಸಿ ಸಿಕ್ಕಿಂನ ಸ್ಥಳೀಯ ಅಧಿಕಾರಿಗಳು ತಕ್ಷಣ ಬಂಧಿತರನ್ನು ಬಿಡುಗಡೆಗೊಳಿಸಬೇಕು ಎಂದು ಗಿರಿ ಒತ್ತಾಯಿಸಿದರು.

ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ನೀಡಿದ ದೂರಿನನ್ವಯ ಸಂಶೋಧಕರನ್ನು ಮಂಗಳವಾರ ಸಂಜೆ ಬಂಧಿಸಲಾಗಿದೆ. ಮತದಾನೋತ್ತರ ಸಮೀಕ್ಷೆಯನ್ನು ವಿರೋಧಿಸಿ ಸ್ಥಳೀಯರು ಪ್ರತಿಭಟಿಸಿದ್ದಾರೆ. ಘಟನೆಗೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ. ಯಾವುದೇ ರೀತಿಯ ಸಮೀಕ್ಷೆ ನಡೆಸುವುದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top