ಪುಲ್ವಾಮ ಸಿಆರ್ಪಿಎಫ್ ಶಿಬಿರದ ಮೇಲೆ ಗ್ರೆನೇಡ್ ದಾಳಿ: ಯೋಧನಿಗೆ ಗಾಯ
ಶ್ರೀನಗರ, ಎ.18: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಸಿಆರ್ಪಿಎಫ್ ಶಿಬಿರದ ಮೇಲೆ ಗುರುವಾರ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಸಿಆರ್ಪಿಎಫ್ ಯೋಧ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟ್ರಾಲ್ ಪ್ರದೇಶದಲ್ಲಿರುವ ಸಿಆರ್ಪಿಎಫ್ನ 180ನೇ ಬಟಾಲಿಯನ್ನ ಶಿಬಿರದ ಮೇಲೆ ಭಯೋತ್ಪಾದಕರು ಅಂಡರ್ ಬ್ಯಾರೆಲ್ ಗ್ರೆನೇಡ್ ಲಾಂಚರ್ ಮೂಲಕ ಗ್ರೆನೇಡ್ ದಾಳಿ ನಡೆಸಿದ್ದಾರೆ. ಶಿಬಿರದ ಒಳಗೆ ಗ್ರೆನೇಡ್ ಸ್ಫೋಟಿಸಿದ್ದು ಸಿಆರ್ಪಿಎಫ್ ಯೋಧ ನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ದಾಳಿ ನಡೆಸಿದ ಉಗ್ರರಿಗಾಗಿ ಪ್ರದೇಶದಲ್ಲಿ ಭದ್ರತಾ ಪಡೆಗಳು ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಎಂದವರು ತಿಳಿಸಿದ್ದಾರೆ.
Next Story