ಛತ್ತೀಸ್ಗಢ: ಇಬ್ಬರು ಮಾವೋವಾದಿಗಳ ಹತ್ಯೆ
ರಾಯ್ಪುರ, ಎ.21: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ರವಿವಾರ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಮಾವೋವಾದಿಗಳು ಹತರಾಗಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ತೆಲಂಗಾಣ ಮತ್ತು ಛತ್ತೀಸ್ಗಢ ಪೊಲೀಸ್ ಪಡೆಯ ವಿಶೇಷ ನಕ್ಸಲ್ ನಿಗ್ರಹ ತಂಡವು ಛತ್ತೀಸ್ಗಢ ಪೊಲೀಸ್ ವಿಶೇಷ ಕಾರ್ಯಪಡೆ ಹಾಗೂ ಜಿಲ್ಲಾ ಪೊಲೀಸ್ ಪಡೆಯ ನೆರವಿನಿಂದ ಅಂತರ್ರಾಜ್ಯ ಗಡಿಯ ಬಳಿಯಿರುವ ಪಮೆಡ್ ಅರಣ್ಯ ಪ್ರದೇಶದಲ್ಲಿ ರವಿವಾರ ಬೆಳಿಗ್ಗೆ ಕಾರ್ಯಾಚರಣೆ ನಡೆಸುತ್ತಿದ್ದಾಗ ಮಾವೋವಾದಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ನಕ್ಸಲ್ ನಿಗ್ರಹ ಕಾರ್ಯಾಚರಣೆಯ ಡಿಐಜಿ ಸುಂದರ್ರಾಜ್ ತಿಳಿಸಿದ್ದಾರೆ.
ಇದಕ್ಕೆ ಭದ್ರತಾ ಪಡೆಗಳು ಪ್ರತ್ಯುತ್ತರ ನೀಡಿದ್ದಾರೆ. ಗುಂಡಿನ ಚಕಮಕಿ ಅಂತ್ಯಗೊಂಡ ಬಳಿಕ ಸ್ಥಳದಲ್ಲಿ ಪರಿಶೀಲನೆ ನಡೆಸಿದಾಗ ಇಬ್ಬರು ಮಾವೋವಾದಿಗಳ ಮೃತದೇಹ ಪತ್ತೆಯಾಗಿದೆ. ಅಲ್ಲದೆ ಶಸ್ತ್ರಾಸ್ತ್ರಗಳನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story