ಕಾಶ್ಮೀರದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರು ಹತ
ಶ್ರೀನಗರ, ಎ. 25: ದಕ್ಷಿಣ ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಬಿಜ್ಬೆಹ್ರಾದಲ್ಲಿ ಭದ್ರತಾ ಪಡೆ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸ್ ಹಾಗೂ ಭದ್ರತಾ ಪಡೆ ಬಿಜ್ಬೆಹ್ರಾದ ಬಗೇಂದರ್ ಮೊಹಲ್ಲಾದಲ್ಲಿ ಶೋಧ ಕಾರ್ಯಾಚರಣೆ ನಡೆಸಿತು.
ಶೋಧ ಕಾರ್ಯಾಚರಣೆ ಸಂದರ್ಭ ಉಗ್ರರು ಗುಂಡು ಹಾರಿಸಿದ. ಭದ್ರತಾ ಸಿಬ್ಬಂದಿ ಪ್ರತಿ ದಾಳಿ ನಡೆಸಿದರು. ಇದರಿಂದ ಗುಂಡಿನ ಚಕಮಕಿ ನಡೆಯಿತು. ಎನ್ಕೌಂಟರ್ ನಡೆದ ಸ್ಥಳದಲ್ಲಿ ಇಬ್ಬರು ಉಗ್ರರ ಮೃತದೇಹ ಪತ್ತೆಯಾಗಿದೆ. ಶಸ್ತ್ರಾಸ್ತ್ರ, ಸ್ಫೋಟಕ ಸಹಿತ ಹಲವು ಕಾನೂನು ಬಾಹಿರ ವಸ್ತುಗಳು ಪತ್ತೆಯಾಗಿವೆ. ಮೃತಪಟ್ಟ ಉಗ್ರರ ಗುರುತು ಹಾಗೂ ಅವರು ಸೇರಿದ ಸಂಘಟನೆ ಬಗ್ಗೆ ಇದುವರೆಗೆ ಮಾಹಿತಿ ಲಭ್ಯವಾಗ್ಲಿ ಎಂದು ಪೊಲೀಸರು ತಿಳಿಸಿದ್ದಾರೆ.
Next Story