ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ: ದಿಲ್ಲಿಗೆ ವಾಪಸ್
ಹೊಸದಿಲ್ಲಿ, ಎ.26: ಪಾಟ್ನಾಕ್ಕೆ ಚುನಾವಣಾ ಪ್ರಚಾರಕ್ಕೆ ಹೊರಟಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಬೆಳಗ್ಗೆ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೊಸದಿಲ್ಲಿಗೆ ವಾಪಸಾಗಿದ್ದಾರೆ.
ಸಮಸ್ತಿಪುರ್ (ಬಿಹಾರ), ಬಾಲಸೋರ್ (ಒಡಿಶಾ) ಮತ್ತು ಸಂಗಮನರ್ (ಮಹಾರಾಷ್ಟ್ರ)ನಲ್ಲಿ ಅವರು ಪಕ್ಷದ ಸಭೆಗಳಲ್ಲಿ ಭಾಗವಹಿಸಬೇಕಾಗಿತ್ತು. ಅನಾನುಕೂಲತೆಗಾಗಿ ಕ್ಷಮೆಯಾಚಿಸುತ್ತೇನೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
Engine trouble on our flight to Patna today! We’ve been forced to return to Delhi. Today’s meetings in Samastipur (Bihar), Balasore (Orissa) & Sangamner (Maharashta) will run late. Apologies for the inconvenience. pic.twitter.com/jfLLjYAgcO
— Rahul Gandhi (@RahulGandhi) 26 April 2019
Next Story