ವಿದೇಶಿ ಪೌರತ್ವ ಹೊಂದಿರುವ ಆರೋಪ : ರಾಹುಲ್ ಗಾಂಧಿಗೆ ಕೇಂದ್ರ ಗೃಹ ಸಚಿವಾಲಯದಿಂದ ನೋಟಿಸ್
ಹೊಸದಿಲ್ಲಿ, ಎ.30: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿದೇಶಿ ಪೌರತ್ವ ಪಡೆದಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ “ವಾಸ್ತಾವಿಕ ಸ್ಥಾನದ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನೋಟಿಸ್ ನೀಡಿದೆ.
ರಾಹುಲ್ ಗಾಂಧಿ ಅವರು ಬ್ರಿಟನ್ ನಲ್ಲಿ ಪೌರತ್ವ ಹೊಂದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಂಸದ ಡಾ.ಸುಬ್ರಮಣಿಯನ್ ಸ್ವಾಮಿ ದೂರು ನೀಡಿದ್ದರು. ಇದೀಗ ಕೇಂದ್ರ ಗೃಹ ಸಚಿವಾಲಯವು ಈ ಬಗ್ಗೆ 15 ದಿನಗಳ ಒಳಗಾಗಿ ಉತ್ತರಿಸುವಂತೆ ರಾಹುಲ್ ಗಾಂಧಿ ಅವರಿಗೆ ಗೃಹ ಸಚಿವಾಲಯದ ನಿರ್ದೇಶಕ(ಪೌರತ್ವ ) ಬಿ.ಸಿ. ಜೋಶಿ ನೋಟಿಸ್ ಜಾರಿ ಮಾಡಿದ್ದಾರೆ.
ರಾಹುಲ್ ಗಾಂಧಿ ಬ್ರಿಟನ್ನ 51 ಸೌತ್ ಗೇಟ್ ಸ್ಟ್ರೀಟ್ ನಲ್ಲಿ ನೋಂದಾಯಿತ ಬ್ಯಾಕೊಪ್ಸ್ ಲಿಮಿಟೆಡ್ ಕಂಪೆನಿಯಲ್ಲಿ ತಮ್ಮನ್ನು ತಾವು ಬ್ರಿಟನ್ ನಾಗರಿಕ ಎಂದು ಘೋಷಿಸಿಕೊಂಡಿದ್ದರಿಂದ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದರು.
Next Story