ಕಾಂಗ್ರೆಸ್ ನಾಯಕರಿಂದ ನನಗೆ ಜೀವ ಬೆದರಿಕೆ : ಪ್ರಧಾನಿ ಮೋದಿ
ಭೋಪಾಲ್, ಮೇ 1: ಕಾಂಗ್ರೆಸ್ ನನ್ನನ್ನು ಹತ್ಯೆ ಮಾಡಲು ಬಯಸುತ್ತಿದೆ. ಕಾಂಗ್ರೆಸ್ ನಾಯಕರಿಂದ ನನಗೆ ಜೀವ ಬೆದರಿಕೆ ಇದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ.
ಮಧ್ಯಪ್ರದೇಶದ ಹೊಶಾಂಗಾಬಾದ್ ನಲ್ಲಿ ಬಿಜೆಪಿಯ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ನನ್ನನ್ನು ಅತಿಯಾಗಿ ದ್ವೇಷಿಸುತ್ತಿದೆ. ಕಾಂಗ್ರೆಸ್ ನಾಯಕರು ನನ್ನನ್ನು ಕೊಲ್ಲುವ ಕನಸು ಕಾಣುತ್ತಿದ್ದಾರೆ ಎಂದು ಆರೋಪಿಸಿದರು.
Next Story