ಬಾಬರಿ ಮಸೀದಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಪ್ರಜ್ಞಾ ಸಿಂಗ್ ಪ್ರಚಾರಕ್ಕೆ 3 ದಿನಗಳ ಕಾಲ ನಿಷೇಧ
ಹೊಸದಿಲ್ಲಿ, ಮೇ 1: ಬಾಬರಿ ಮಸೀದಿ ಧ್ವಂಸದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಅಭ್ಯರ್ಥಿ, ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಪ್ರಜ್ಞಾ ಸಿಂಗ್ ಗೆ ಚುನಾವಣಾ ಆಯೋಗ ಪ್ರಚಾರದಿಂದ 72 ಗಂಟೆಗಳ ಕಾಲ ನಿಷೇಧ ಹೇರಿದೆ.
ಗುರುವಾರ ಬೆಳಗ್ಗೆ 6 ಗಂಟೆಯಿಂದ ನಿಷೇಧದ ಅವಧಿ ಆರಂಭವಾಗಲಿದೆ. ಸಂದರ್ಶನವೊಂದರಲ್ಲಿ ಮಾತನಾಡಿದ್ದ ಪ್ರಜ್ಞಾ ಸಿಂಗ್, “ಬಾಬರಿ ಮಸೀದಿಯನ್ನು ನಾವು ದ್ವಂಸಗೈದಿದ್ದೆವು. ಈ ಬಗ್ಗೆ ನನಗೆ ಹೆಮ್ಮೆಯಿದೆ” ಎಂದು ಹೇಳಿದ್ದರು.
Next Story