ವಿಚಾರಣಾ ಸಮಿತಿ ಮುಂದೆ ಹಾಜರಾದ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್
ಹೊಸದಿಲ್ಲಿ, ಮೇ.1: ಸುಪ್ರೀಂ ಕೋರ್ಟ್ ನ ಮಾಜಿ ಉದ್ಯೋಗಿಯೊಬ್ಬರು ಮಾಡಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಸುಪ್ರೀಂ ಕೋರ್ಟ್ ನ ಮೂವರು ನ್ಯಾಯಮೂರ್ತಿಗಳ ಉನ್ನತ ಮಟ್ಟದ ಸಮಿತಿಯ ಮುಂದೆ ಬುಧವಾರ ವಿಚಾರಣೆಗೆ ಹಾಜರಾಗಿದ್ದಾರೆ.
ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ ಸಮಿತಿಯು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರಿಗೆ ಸಮಿತಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.
ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ ಸುಪ್ರೀಂ ಕೋರ್ಟ್ ನ ಉನ್ನತ ಮಟ್ಟದ ಸಮಿತಿಯಲ್ಲಿ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಇಂಧು ಮಲ್ಹೋತ್ರಾ ಇದ್ದಾರೆ.
Next Story