ರಾಹುಲ್ ಗಾಂಧಿಗೆ ಚುನಾವಣಾ ಆಯೋಗದ ಶೋಕಾಸ್ ನೋಟಿಸ್
ಹೊಸದಿಲ್ಲಿ, ಮೇ 2: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಎ.23ರಂದು ರಾಹುಲ್ ಗಾಂಧಿ ಮಧ್ಯಪ್ರದೇಶದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಆಧಾರರಹಿತ ಆರೋಪ ಮಾಡಿದ್ದರು ಎನ್ನಲಾಗಿದೆ. ಈ ಸಂಬಂಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಬಿಜೆಪಿ ದೂರು ನೀಡಿದ ಒಂದು ವಾರದ ಬಳಿಕ ಚುನಾವಣಾ ಆಯೋಗವು ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿದ್ದು, ನೋಟಿಸ್ ಗೆ 48 ಗಂಟೆಗಳ ಒಳಗಾಗಿ ಉತ್ತರಿಸದೆ ಇದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಚುನಾವಣಾ ಆಯೋಗವು ಎಚ್ಚರಿಸಿದೆ.
Next Story