ಪ್ರಧಾನಿ ಮೋದಿ ಜೀವನಚರಿತ್ರೆ ಆಧರಿತ ಚಿತ್ರ ಬಿಡುಗಡೆಗೆ ದಿನಾಂಕ ಫಿಕ್ಸ್
ಲೋಕಸಭಾ ಚುನಾವಣೆ ಫಲಿತಾಂಶ ಮರುದಿನ ಮೇ 24ಕ್ಕೆ ಬಿಡುಗಡೆ
ಹೊಸದಿಲ್ಲಿ, ಮೇ 3: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜೀವನಚರಿತ್ರೆ ಆಧರಿತ ಚಿತ್ರದ ಬಿಡುಗಡೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ.
ಈಗ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆ ಫಲಿತಾಂಶ ಪ್ರಕಟವಾಗುವ ಮರುದಿನವೇ ಮೇ 24 ರಂದು ಚಿತ್ರವನ್ನು ಬಿಡುಗಡೆಗೊಳಿಸಲು ಚಿತ್ರ ನಿರ್ಮಾಪಕರು ನಿರ್ಧರಿಸಿದ್ದಾರೆ.
ಚಿತ್ರದಲ್ಲಿ ಬಾಲಿವುಡ್ ನಟ ವಿವೇಕ್ ಒಬೆರಾಯ್, ನರೇಂದ್ರ ಮೋದಿ ಅವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಎ.11 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲು ಸಜ್ಜಾಗಿತ್ತು. ಲೋಕಸಭಾ ಚುನಾವಣೆ ಮುಗಿಯುವ ತನಕ ಚಿತ್ರ ಬಿಡುಗಡೆ ಮಾಡದಂತೆ ಚುನಾವಣಾ ಆಯೋಗ ನಿಷೇಧಿಸಿತು. ಮೇ 19ರ ತನಕ ಚಿತ್ರ ಬಿಡುಗಡೆಗೆ ತಡೆಯೊಡ್ಡಿರುವ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಚಿತ್ರ ನಿರ್ಮಾಪಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ನ್ಯಾಯಾಲಯವು ಆಯೋಗದ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿತ್ತು.
Next Story