ನೀಟ್ ಪರೀಕ್ಷೆ ಮಂದೂಡಿಕೆ
ಹೊಸದಿಲ್ಲಿ: ಫನಿ ಚಂಡಮಾರುತ ಅಪ್ಪಳಿಸಿದ ಹಿನ್ನೆಲೆಯಲ್ಲಿ ಒಡಿಶಾದಲ್ಲಿ ನೀಟ್ ಪರೀಕ್ಷೆ ಮುಂದೂಡಲಾಗಿದೆ ಎಂದು ಮಾನವ ಸಂಪನ್ಮೂಲ ಸಚಿವಾಲಯ ಶನಿವಾರ ಪ್ರಕಟಿಸಿದೆ. ರಾಜ್ಯದಲ್ಲಿ ಪರಿಹಾರ ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡುವಂತೆ ಒಡಿಶಾ ಸರಕಾರ ಮಾಡಿದ ಮನವಿಯ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಒಡಿಶಾದಲ್ಲಿ ನೀಟ್ ಪರೀಕ್ಷೆ ಮೇ 5ರಂದು ನಡೆಯಲಿತ್ತು. ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ಮಾನವ ಸಂಪನ್ಮೂಲಕ ಅಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಆರ್. ಸುಬ್ರಹ್ಮಣೀಯನ್ ಟ್ವೀಟ್ ಮಾಡಿದ್ದಾರೆ.
Next Story