ಅಮೇಥಿಯಲ್ಲಿ ಸ್ಮೃತಿ ಇರಾನಿ ಜಯಭೇರಿ, ರಾಹುಲ್ ಗಾಂಧಿಗೆ ಭಾರೀ ಮುಖಭಂಗ
ಹೊಸದಿಲ್ಲಿ, ಮೇ 23: 2019ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಗೆಲುವು ದಾಖಲಿಸಿದ್ದು, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಯವರು ಸೋಲನ್ನು ಅನುಭವಿಸಿದ್ದಾರೆ.
ರಾಹುಲ್ ಸುಮಾರು 30 ಸಾವಿರಕ್ಕೂ ಅಧಿಕ ಮತಗಳಿಂದ ಸೋಲನುಭವಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ರಾಹುಲ್, ಅಮೇಥಿಯಲ್ಲಿ ಸ್ಮೃತಿ ಇರಾನಿ ಗೆಲುವು ದಾಖಲಿಸಿದ್ದಾರೆ. ಅದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.
ಆದರೆ ಅಮೇಥಿಯ ಮತ ಎಣಿಕೆ ಇನ್ನೂ ನಡೆಯುತ್ತಿದ್ದು, ಈ ಬಗ್ಗೆ ಚುನಾವಣಾ ಆಯೋಗದ ಅಧಿಕೃತ ಘೋಷಣೆ ಹೊರಬಿದ್ದಿಲ್ಲ.
Next Story