ದಾಮನ್ ಮತ್ತು ದಿಯು ಕ್ಷೇತ್ರ ಗೆದ್ದ ಬಿಜೆಪಿ
ದಾಮನ್, ಮೇ 23: ಕೇಂದ್ರಾಡಳಿತ ಪ್ರದೇಶವಾಗಿರುವ ದಾಮನ್ ಮತ್ತು ದಿಯು ಸಂಸದೀಯ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಲಾಲುಭಾಯ್ ಪಟೇಲ್ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ನ ಕೇತನ್ ಪಟೇಲ್ ಎದುರು 9,942 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ 37,586 ಮತ, ಕಾಂಗ್ರೆಸ್ ಅಭ್ಯರ್ಥಿ 27,643 ಮತ ಗಳಿಸಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಬಾಬೂಭಾಯ್ ಪಟೇಲ್ 19,938 ಮತ ಗಳಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
Next Story