ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಗೆ ಅಮಿತ್ ಶಾ ತರಾಟೆ
ಹೊಸದಿಲ್ಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಸುಶೀಲ್ ಮೋದಿ ಇಫ್ತಾರ್ ಕೂಟದಲ್ಲಿ ಭಾಗಿಯಾಗಿರುವುದಕ್ಕೆ ವ್ಯಂಗ್ಯವಾಡಿರುವ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರನ್ನು ಗೃಹ ಸಚಿವ ಅಮಿತ್ ಶಾ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಕುರಿತು ಸಿಂಗ್ಗೆ ಕರೆ ಮಾಡಿದ ಶಾ, ಈ ರೀತಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಮತ್ತು ಭವಿಷ್ಯದಲ್ಲಿ ಇದು ಪುನರಾವರ್ತನೆಯಾಗಬಾರದು ಎಂದು ಸೂಚಿಸಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. ಮೋದಿ ಸರಕಾರದಲ್ಲಿ ಕೇವಲ ಒಂದು ಸಚಿವ ಸ್ಥಾನ ನೀಡಿದ ನಂತರ ಜೆಡಿಯು ನಾಯಕ ನಿತೀಶ್ ಕುಮಾರ್ ಮತ್ತು ಬಿಜೆಪಿ ಮಧ್ಯೆ ಎಲ್ಲವೂ ಸರಿಯಿಲ್ಲ ಎಂದು ವರದಿಯಾಗಿತ್ತು. ನಿತೀಶ್ ಈ ಒಂದು ಸ್ಥಾನವನ್ನು ನಿರಾಕರಿಸಿದ್ದರು.
Next Story