ಕಾಶ್ಮೀರದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಹತ್ಯೆ
ಶ್ರೀನಗರ: ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಶೋಪಿಯಾನ್ ಜಿಲ್ಲೆಯ ಧರ್ಮದೋರಾ ಕೀಗಂ ಪ್ರದೇಶದಲ್ಲಿ ಗುಂಡಿನ ಚಕಮಕಿ ಮುಂದುವರಿದಿದೆ ಎಂದು ಎಎನ್ಐ ವರದಿ ಮಾಡಿದೆ.
ಧರ್ಮದೋರಾ ಕೀಗಂ ಪ್ರದೇಶದಲ್ಲಿ ಉಗ್ರರು ಹಾಗೂ ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ ನಡೆದಿದ್ದು, ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದೂ ಕಾಶ್ಮೀರ ವಲಯ ಪೊಲೀಸ್ ಟ್ವಿಟ್ಟರ್ ಹ್ಯಾಂಡಲ್ ಟ್ವೀಟ್ ಮಾಡಿದೆ.
ಸೇನೆಯ 44 ರಾಷ್ಟ್ರೀಯ ರೈಫಲ್ಸ್, ಸಿಆರ್ಪಿಎಫ್ನ 14ನೇ ಬೆಟಾಲಿಯನ್ ಮತ್ತು ಎಸ್ಒಜಿ ಕಾರ್ಯಾಚರಣೆ ಮುಂದುವರಿದಿದೆ. ಈ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಆಧಾರದಲ್ಲಿ ರವಿವಾರ ನಸುಕಿನಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಉನ್ನತ ಮೂಲಗಳು ಹೇಳಿವೆ.
ಮೃತರ ಗುರುತು ಪತ್ತೆಯಾಗಿಲ್ಲ. ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಪ್ರದೇಶದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ರದ್ದುಪಡಿಸಲಾಗಿದೆ.
Next Story