ಕರ್ನಾಟಕದಲ್ಲಿ ಬಿಜೆಪಿ ಕುದುರೆ ವ್ಯಾಪಾರ ಮಾಡುತ್ತಿಲ್ಲ: ರಾಜನಾಥ್ ಸಿಂಗ್
ಹೊಸದಿಲ್ಲಿ, ಜು.8: ಕರ್ನಾಟಕದಲ್ಲಿ ಕುದುರೆ ವ್ಯಾಪಾರದಲ್ಲಿ ಬಿಜೆಪಿ ಭಾಗಿಯಾಗಿಲ್ಲ. ಶಾಸಕರ ರಾಜೀನಾಮೆಯಲ್ಲಿ ಬಿಜೆಪಿ ಕೈವಾಡ ಇಲ್ಲ ಎಂದು ಲೋಕಸಭೆಯಲ್ಲಿ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಹೇಳಿಕೆ ನೀಡಿದ್ದಾರೆ.
ಕರ್ನಾಟಕದ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯರು ಲೋಕಸಭೆಯಲ್ಲಿ ಪ್ರಸ್ತಾಪಿಸಿದಾಗ ಸಚಿವ ರಾಜ್ ನಾಥ್ ಸಿಂಗ್ ಹೇಳಿಕೆ ನೀಡಿದ್ದಾರೆ. ಸಮ್ಮಿಶ್ರ ಸರಕಾರ ಉರುಳಿಸಲು ಬಿಜೆಪಿ ಷಡ್ಯಂತ್ರ ನಡೆಸಿದೆ ಎಂದು ಆರೋಪಿಸಿ ಲೋಕಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಧರಣಿ ನಡೆಸಿದರು.
ಕಾಂಗ್ರೆಸ್ ಸದಸ್ಯರ ಗದ್ದಲದ ಹಿನ್ನೆಲೆಯಲ್ಲಿ ಲೋಕಸಭೆಯ ಕಲಾಪವನ್ನು ಸ್ಪೀಕರ್ ಮಧ್ಯಾಹ್ನ 2 ಗಂಟೆಗೆ ಮುಂದೂಡಿದ್ದಾರೆ.
Next Story