ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಇಬ್ಬರು ಮೃತ್ಯು
ಅವಶೇಷಗಳಡಿಯಲ್ಲಿ 40ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ
ಮುಂಬೈ, ಜು.16: ಮುಂಬೈನ ಡೋಂಗ್ರಿಯಲ್ಲಿ ಮಂಗಳವಾರ ಬೆಳಗ್ಗೆ 11:40ಕ್ಕೆ ಬಹುಮಹಡಿಯ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮವಾಗಿ 2 ಮಂದಿ ಮೃತಪಟ್ಟು 40ಕ್ಕೂ ಅಧಿಕ ಮಂದಿ ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿರುವ ಘಟನೆ ವರದಿಯಾಗಿದೆ. ನಾಲ್ವರು ಈ ವೇಳೆ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಗ್ನಿಶಾಮಕ ದಳ ಮತ್ತು ಎನ್ ಡಿಆರ್ ಎಫ್ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿದ್ದು, ಈಗಾಗಲೇ 5 ಮಂದಿಯನ್ನು ರಕ್ಷಿಸಲಾಗಿದೆ.
Next Story