ಚೆನ್ನೈನಲ್ಲಿ ಭಾರೀ ಮಳೆ: ಗೋಡೆ ಕುಸಿದು ಮಹಿಳೆ ಮೃತ್ಯು
ಹೊಸದಿಲ್ಲಿ, ಸೆ.19: ಚೆನ್ನೈನಲ್ಲಿ ಭಾರೀ ಮಳೆ ಸುರಿದ ಕಾರಣ ಮನೆಯ ಗೋಡೆಯ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಮನ್ನಾಡಿಯಲ್ಲಿ ಸಂಭವಿಸಿದೆ.
ಮಳೆ ಚೆನ್ನೈ ನಗರ, ತಿರುವಲ್ಲೂರು ಹಾಗೂ ಕಾಂಚಿಪುರಂ ಜಿಲ್ಲೆಯಲ್ಲಿ ಮಳೆ ಸುರಿದಿದೆ. ಹಲವು ರಸ್ತೆಗಳು ಜಲಾವೃತವಾಗಿದ್ದು, ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ.
ಬೆಳಗ್ಗೆ 4 ಗಂಟೆ ಸುಮಾರಿಗೆ ಝರಿಮಾ ಬೇಗಂ ತಮ್ಮ ಹಂಚಿನ ಮನೆಯಲ್ಲಿ ನಿದ್ರಿಸುತ್ತಿದ್ದಾಗ ಗೋಡೆಯ ಒಂದು ಭಾಗ ಕುಸಿದು ಅವರ ಮೇಲೆ ಬಿದ್ದಿದೆ. ಬೇಗಂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೊಲೀಸರು, ಅಗ್ನಿಶಾಮಕ ದಳ ಹಾಗೂ ರಕ್ಷಣಾ ಸಿಬ್ಬಂದಿ ಮೃತದೇಹವನ್ನು ಹೊರ ತೆಗೆದು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.
Next Story