ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಆರು ಜನರ ಸಾವು, ಹಲವರಿಗೆ ಗಾಯ
ಲಕ್ನೋ,ಸೆ.21: ಇಟಾದ ಗುದ್ಧಾ ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಟ ಆರು ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಇನ್ನೂ ಕೆಲವರು ಕಟ್ಟಡದ ಅವಶೇಷಗಳಡಿ ಸಿಕ್ಕಿ ಹಾಕಿಕೊಂಡಿರುವ ಭೀತಿ ವ್ಯಕ್ತವಾಗಿದೆ.
ತೀವ್ರವಾಗಿ ಗಾಯಗೊಂಡಿರುವ 11 ಜನರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಎಸ್ಪಿ ಸಂಜಯ್ ಕುಮಾರ್ ತಿಳಿಸಿದರು.
ಬೆಳಿಗ್ಗೆ 11 ಗಂಟೆಗೆ ಮೊದಲ ಸ್ಫೋಟ ಸಂಭವಿಸಿದ ಬೆನ್ನಿಗೇ ಇನ್ನೂ 15-20 ಸ್ಫೋಟಗಳುಂಟಾಗಿದ್ದು,ಎಲ್ಲೆಡೆ ದಟ್ಟ ಹೊಗೆ ಆವರಿಸಿತ್ತು.
ಮನೆಯೊಂದರಲ್ಲಿ ಕಾರ್ಯಾಚರಿಸುತ್ತಿದ್ದ ಈ ಪಟಾಕಿ ಕಾರ್ಖಾನೆಯ ಪರವಾನಿಗೆ ಮುನ್ನಿ ದೇವಿ ಎಂಬಾಕೆಯ ಹೆಸರಿನಲ್ಲಿದೆ. ದುರಂತ ಸಂಭವಿಸಿದಾಗ ಕನಿಷ್ಠ 15-20 ಜನರು ಅಲ್ಲಿ ಕೆಲಸ ಮಾಡುತ್ತಿದ್ದರು.
Next Story