ಚಿತ್ರದುರ್ಗ: ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ 60ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
ಫೋಟೊ: ANI
ಚಿತ್ರದುರ್ಗ, ನ.6: ಚಿತ್ರದುರ್ಗದ ಪ್ರಾಥಮಿಕ ಶಾಲೆಯೊಂದರಲ್ಲಿ ಮಧ್ಯಾಹ್ನದ ಊಟ ಸೇವಿಸಿದ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚಳ್ಳಕೆರೆ ತಾಲೂಕು ನಾಯಕನಹಟ್ಟಿ ಸಮೀಪದ ಚನ್ನಬಸಯ್ಯನಹಟ್ಟಿ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, ಅಸ್ವಸ್ಥ ವಿದ್ಯಾರ್ಥಿಗಳು ನಾಯಕಹಟ್ಟಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾದರು.
ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ನಂತರ ಹೊಟ್ಟೆ ನೋವು ಮತ್ತು ವಾಂತಿ ಕಾಣಿಸಿಕೊಂಡಿತು ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
Next Story