ಐಎನ್ಎಕ್ಸ್ ಮೀಡಿಯಾ ಪ್ರಕರಣ: ಚಿದಂಬರಂಗೆ ಜಾಮೀನು ನಿರಾಕರಿಸಿದ ಹೈಕೋರ್ಟ್
ಹೊಸದಿಲ್ಲಿ, ನ.15: ಐಎನ್ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಪಿ ಚಿದಂಬರಂಗೆ ದಿಲ್ಲಿ ಹೈಕೋರ್ಟ್ ಜಾಮೀನು ನಿರಾಕರಿಸಿದೆ.
ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ದಿಲ್ಲಿ ಹೈಕೋರ್ಟ್ ನವೆಂಬರ್ 8ರಂದು ತೀರ್ಪನ್ನು ಕಾಯ್ದಿರಿಸಿತ್ತು. ಪ್ರಕರಣ ವಿಚಾರಣೆಯ ಹಂತದಲ್ಲಿರುವಾಗ ಅವರನ್ನು ಬಿಡುಗಡೆ ಮಾಡಿದರೆ ಇದರಿಂದ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ನ್ಯಾಯಮೂರ್ತಿ ಸುರೇಶ್ ಕೈಟ್ ಹೇಳಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.
ಇದೀಗ ಜಾಮೀನು ಕೋರಿ ಚಿದಂಬರಂ ಪರ ವಕೀಲರು ಸುಪ್ರೀಂಕೋರ್ಟ್ ಮೊರೆಹೋಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಐಎನ್ಎಕ್ಸ್ ಮಾಧ್ಯಮ ಪ್ರಕರಣದಲ್ಲಿ ಆಗಸ್ಟ್ 8ರಂದು ಸಿಬಿಐ ಚಿದಂಬರಂರನ್ನು ಬಂಧಿಸಿತ್ತು. ಕಳೆದ ತಿಂಗಳು ಸುಪ್ರೀಂಕೋರ್ಟ್ ಚಿದಂಬರಂಗೆ ಜಾಮೀನು ಮಂಜೂರುಗೊಳಿಸಿದ್ದರೂ , ಐಎನ್ಎಕ್ಸ್ ಮಾಧ್ಯಮ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಚಿದಂಬರಂರನ್ನು ಬಂಧಿಸಿದೆ.
Next Story