ಬಿಜೆಪಿ ಅಧ್ಯಕ್ಷ ಹುದ್ದೆಗೆ ಜೆ.ಪಿ.ನಡ್ಡಾ ನಾಮಪತ್ರ
ಹೊಸದಿಲ್ಲಿ, ಜ.20: ಬಿಜಪಿಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆ.ಪಿ. ನಡ್ಡಾ ಸೋಮವಾರ ಬೆಳಗ್ಗೆ ನಾಮಪತ್ರ ಸಲ್ಲಿಸಿದರು.
ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಚುನಾವಣಾಧಿಕಾರಿ ರಾಧಾ ಮೋಹನ್ ಸಿಂಗ್ ಅವರಿಗೆ ನಡ್ಡಾ ನಾಮಪತ್ರ ಸಲ್ಲಿಸಿದರು. ಬಿಜೆಪಿ ಅಧ್ಯಕ್ಷ ಅಮಿತ್ ಶಾ,ಮಾಜಿ ಅಧ್ಯಕ್ಷರಾದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಮತ್ತಿತರರು ಉಪಸ್ಥಿತರಿದ್ದರು.
Next Story