ಪುಲ್ವಾಮಾದಲ್ಲಿ ಎನ್ಕೌಂಟರ್ : ಮೂವರು ಉಗ್ರರ ಹತ್ಯೆ
ಶ್ರೀನಗರ, ಜ.20: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ವಾಚಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಸಂಭವಿಸಿದೆ. ಗ್ರಾಮದಲ್ಲಿ ಅಡಗಿದ್ದ ಮೂವರು ಉಗ್ರರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದಿದೆ.
ಈ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಬಂದ ನಂತರ ಭಾರತೀಯ ಸೇನೆಯ 55 ರಾಷ್ಟ್ರೀಯ ರೈಫಲ್ಸ್ ಮತ್ತು ಜೆ & ಕೆ ಪೊಲೀಸರ ವಿಶೇಷ ತಂಡ ಸೋಮವಾರ ಮುಂಜಾನೆ ವಾಚಿ ಗ್ರಾಮ ಉಗ್ರರಿಗಾಗಿ ಶೋಧ ನಡೆಸಿದ್ದವು.
ಕಾರ್ಡನ್ ಮತ್ತು ಶೋಧದ ಸಮಯದಲ್ಲಿ, ವಸತಿ ಮನೆಯಲ್ಲಿ ಅಡಗಿರುವ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು, ಎನ್ನಲಾಗಿದೆ. ಆಗ ಭದ್ರತಾ ಪಡೆಗಳು ಗುಂಡು ಹಾರಿಸಿದಾಗ ಮೂವರು ಉಗ್ರರು ಮೃತಪಟ್ಟಿದ್ದಾರೆ.
Next Story