ಛತ್ತೀಸ್ಗಢ: ಎನ್ಕೌಂಟರ್ನಲ್ಲಿ ನಕ್ಸಲ್ ಹತ್ಯೆ; ಇಬ್ಬರು ಯೋಧರು ಹುತಾತ್ಮ
ರಾಯ್ಪುರ, ಫೆ.10: ಛತ್ತೀಸ್ಗಢದ ಬಿಜಾಪುರ್ ಜಿಲ್ಲೆಯಲ್ಲಿ ಸೋಮವಾರ ನಡೆದ ಎನ್ಕೌಂಟರ್ನಲ್ಲಿ ಓರ್ವ ನಕ್ಸಲ್ ಹತನಾಗಿದ್ದಾನೆ. ಇಬ್ಬರು ಸಿಆರ್ಪಿಎಫ್ ಯೋಧರೂ ಮೃತರಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬಿಜಾಪುರ ಜಿಲ್ಲೆಯ ಇರಾಪಳ್ಳಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದಾಗ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿಯಾಗಿ ಭದ್ರತಾ ಪಡೆಗಳೂ ದಾಳಿ ನಡೆಸಿದ್ದು ಓರ್ವ ನಕ್ಸಲ್ ಹತನಾಗಿದ್ದಾನೆ.
ಸಿಆರ್ಪಿಎಫ್ 204 ಬಟಾಲಿಯನ್ನ ಇಬ್ಬರು ಯೋಧರು ಮೃತಪಟ್ಟಿದ್ದು ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಎನ್ಕೌಂಟರ್ ನಡೆದ ಸ್ಥಳದಿಂದ ರೈಫಲ್ ಅನ್ನು ವಶಕ್ಕೆ ಪಡೆಯಲಾಗಿದೆ. ಹೆಚ್ಚುವರಿ ಯೋಧರನ್ನು ಸ್ಥಳಕ್ಕೆ ರವಾನಿಸಲಾಗಿದ್ದು ನಕ್ಸಲರ ಪತ್ತೆ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story