ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ಸಿಆರ್ಪಿಎಫ್ ಯೋಧನ ಬಂಧನ
ಸುಕ್ಮಾ(ಛತ್ತೀಸ್ಗಡ), ಜು.31:ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ(ಸಿಆರ್ಪಿಎಫ್)ಯೋಧನೊಬ್ಬನನ್ನು ಸುಕ್ಮಾ ಜಿಲ್ಲೆಯಲ್ಲಿ ಗುರುವಾರ ಬಂಧಿಸಲಾಗಿದೆ.
ತನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಸಂತ್ರಸ್ತ ಬಾಲಕಿ ಹಾಗೂ ಆಕೆಯ ಕುಟುಂಬದವರು ದೊರ್ನಾಪಾಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆ ನಂತರ ಆರೋಪಿಯನ್ನು ಬಂಧಿಸಲಾಗಿದೆ.
"ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ದೂರು ದಾಖಲಾಗಿದ್ದು, ಅದರ ಆಧಾರದಲ್ಲಿ ನಾವು ತಕ್ಷಣವೇ ಎಫ್ಐಆರ್ ದಾಖಲಿಸಿಕೊಂಡಿದ್ದೇವೆ. ಆರೋಪಿಯನ್ನು ಬಂಧಿಸಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನದಲ್ಲಿಡಲಾಗಿದೆ'' ಎಂದು ಸುಕ್ಮಾ ಉಪ ವಿಭಾಗೀಯ ಅಧಿಕಾರಿ ಅಖಿಲೇಶ್ ಕೌಶಿಕ್ ತಿಳಿಸಿದ್ದಾರೆ.
Next Story