ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂಗೆ ಕೊರೋನ ಪಾಸಿಟಿವ್
ಹೊಸದಿಲ್ಲಿ, ಆ.3: ನನಗೆ ಕೋವಿಡ್-19 ಸೋಂಕು ತಗಲಿದೆ ಎಂದು ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಸೋಮವಾರ ಟ್ವೀಟ್ ಮಾಡಿದ್ದಾರೆ.
"ನನಗೆ ಕೊರೋನದ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿತ್ತು. ವೈದ್ಯರ ಸಲಹೆಯ ಮೇರೆಗೆ ಸ್ವಯಂ ಐಸೋಲೇಶನ್ನಲ್ಲಿದ್ದೇನೆ'' ಎಂದು ಮಾಜಿ ವಿತ್ತ ಸಚಿವ ಚಿದಂಬರಂ ಅವರ ಪುತ್ರ ಟ್ವೀಟ್ ಮಾಡಿದ್ದಾರೆ.
"ನನ್ನ ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದೆ. ನನ್ನಲ್ಲಿ ಸ್ವಲ್ಪ ಪ್ರಮಾಣದಲ್ಲಿ ಸೋಂಕಿನ ಲಕ್ಷಣ ವಿತ್ತು. ತಕ್ಷಣವೇ ಪರೀಕ್ಷೆ ಮಾಡಿಸಿಕೊಂಡೆ. ನಾನೀಗ ಹೋಮ್ ಕ್ವಾರಂಟೈನ್ನಲ್ಲಿದ್ದೇನೆ. ನನ್ನೊಂದಿಗೆ ಇತ್ತೀಚೆಗೆ ಸಂಪರ್ಕದಲ್ಲಿದ್ದವರೆಲ್ಲರೂ ವೈದ್ಯಕೀಯ ಶಿಷ್ಟಾಚಾರವನ್ನು ಪಾಲಿಸಿ'' ಎಂದು ಕಾರ್ತಿ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರಿಗೆ ಕೋವಿಡ್-19ಸೋಂಕು ದೃಢಪಟ್ಟ ಮರುದಿನವೇ ಕಾರ್ತಿಗೆ ಕೂಡ ಕೊರೋನ ವೈರಸ್ ಬಾಧಿಸಿದೆ. ಅಮಿತ್ ಶಾ ಕೊರೋನ ವೈರಸ್ ಬಾಧಿತರಾಗಿರುವ ಮೊದಲ ಕೇಂದ್ರ ಸಚಿವರಾಗಿದ್ದಾರೆ.
Next Story