16 ಮೃತದೇಹಗಳು ಪತ್ತೆ: ಇಡುಕ್ಕಿ ಭೂಕುಸಿತದಲ್ಲಿ ಮೃತರ ಸಂಖ್ಯೆ 43ಕ್ಕೇರಿಕೆ
30 ಮಂದಿ ಇನ್ನೂ ನಾಪತ್ತೆ
ಕೊಚ್ಚಿ: ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ 16 ಮೃತದೇಹಗಳು ಪತ್ತೆಯಾಗಿದ್ದು, ಮೃತರ ಸಂಖ್ಯೆ 43ಕ್ಕೇರಿದೆ. ಇನ್ನೂ 30 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಿಂದ ಹಲವು ಚಹಾ ಪ್ಲಾಂಟ್ ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದಾರೆ. ನಾಪತ್ತೆಯಾದವರ ಶೋಧ ಕಾರ್ಯ ಮುಂದುವರಿದಿದ್ದು, ಶ್ವಾನದಳವನ್ನು ಬಳಸಲಾಗುತ್ತಿದೆ.
Next Story