ಅಮಿತ್ ಶಾ ಗುಣಮುಖ, ಸದ್ಯವೇ ಆಸ್ಪತ್ರೆಯಿಂದ ಬಿಡುಗಡೆ
ಹೊಸದಿಲ್ಲಿ: ಇತ್ತೀಚೆಗೆ ಕೋವಿಡ್ ಸೋಂಕಿಗೊಳಗಾಗಿ ಗುಣಮುಖರಾದ ನಂತರ ಅತಿಯಾದ ಸುಸ್ತು ಮತ್ತು ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಏಮ್ಸ್ ಗೆ ದಾಖಲಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಣಮುಖರಾಗಿದ್ದು ಸದ್ಯದಲ್ಲಿಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಆಸ್ಪತ್ರೆ ಹೇಳಿಕೆ ನೀಡಿದೆ.
ಕಳೆದ ತಿಂಗಳು ಕೋವಿಡ್ ಚಿಕಿತ್ಸೆಗೆ ಮೇದಾಂತ ಆಸ್ಪತ್ರೆಗೆ ದಾಖಲಾಗಿ ಅಮಿತ್ ಶಾ ಚಿಕಿತ್ಸೆ ಪಡೆದು ಮನೆಗೆ ವಾಪಸಾಗಿದ್ದರಲ್ಲದೆ ಸ್ವಾತಂತ್ರ್ಯ ದಿನ ಕಾರ್ಯಕ್ರಮದಲ್ಲೂ ಭಾಗವಹಿಸಿದ್ದರು.
Next Story