ಲಕ್ನೋ, ಎ.26: ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿಗೆ ನ್ಯಾಯಾಲಯವು ಜಾಮೀನು ನೀಡಿದೆ.
ಗಾಯತ್ರಿ ಪ್ರಜಾಪತಿಯನ್ನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಒಂದು ತಿಂಗಳ ಹಿಂದೆ ಬಂಧಿಸಲಾಗಿತ್ತು. ಲಕ್ನೋದ ಪೋಕ್ಸೊ ನ್ಯಾಯಾಲಯವು ಅವರಿಗೆ ಜಾಮೀನು ನೀಡಿದೆ.