ಇಂದು ಸಂಜೆ 5 ಗಂಟೆಗೆ ರಾಷ್ಟ್ರಪತಿ ಚುನಾವಣೆಗೆ ವೇಳಾಪಟ್ಟಿ ಪ್ರಕಟ
ಹೊಸದಿಲ್ಲಿ, ಜೂ.7: ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿ ಇಂದು ಸಂಜೆ 5ಗಂಟೆಗೆ ಪ್ರಕಟಗೊಳ್ಳಲಿದೆ.
ಕೇಂದ್ರ ಚುನಾವಣಾ ಆಯೋಗವು ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಅಧಿಕಾರದ ಅವಧಿ ಮುಂದಿನ ತಿಂಗಳು ಮುಕ್ತಾಯಗೊಳ್ಳಲಿದೆ.
ಆಡಳಿತಾರೂಢ ಎನ್ ಡಿಎ ರಾಷ್ಟ್ರಪತಿ ಹುದ್ದೆಗೆ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿಲ್ಲ. ವಿಪಕ್ಷ ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳು ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯ ಆಯ್ಕೆಗೆ ಕಸರತ್ತು ನಡೆಸುತ್ತಿದೆ.
Next Story