ಉಪರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿಯಾಗಿ ವೆಂಕಯ್ಯ ನಾಯ್ಡು
ಹೊಸದಿಲ್ಲಿ, ಜು.17: ಉಪರಾಷ್ಟ್ರಪತಿ ಹುದ್ದೆಗೆ ಎನ್ಡಿಎ ಅಭ್ಯರ್ಥಿಯಾಗಿ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಎಂ.ವೆಂಕಯ್ಯ ನಾಯ್ಡು ಅವರ ಹೆಸರು ಅಂತಿಮಗೊಂಡಿದೆ. ಬಿಜೆಪಿಯ ಮಾಜಿ ಅಧ್ಯಕ್ಷರಾಗಿರುವ ನಾಯ್ಡು, ಸೋಮವಾರ ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಆಗಸ್ಟ್ 5ರಂದು ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯಲಿದೆ. ವಿಪಕ್ಷಗಳು ಈಗಾಗಲೇ ಮಹಾತ್ಮಾ ಗಾಂಧೀಜಿಯವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿಯವರನ್ನು ತಮ್ಮ ಅಭ್ಯರ್ಥಿ ಎಂದು ಘೋಷಿಸಿವೆ. ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜು.18 ಅಂತಿಮ ದಿನವಾಗಿದೆ.
Next Story